ರಾಮನಗರ : ನಿನ್ನೆ ಬಳ್ಳಾರಿಯ ಸಂಡೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಮೂರುವರೆ ವರ್ಷ ಕಾಂಗ್ರೆಸ್ ಅಧಿಕಾರದಲ್ಲಿರಲಿದ್ದು, ನಾನೆ ಪೂರ್ಣಾವಧಿ ಸಿಎಂ ಆಗುತ್ತೇನೆ ಎಂದು ತಿಳಿಸಿದ್ದಾರೆ. ಇದೀಗ ಇಂದು ಡಿಕೆ ಶಿವಕುಮಾರ್ ಬೆಂಬಲಿಗರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಅಂತ ಘೋಷಣೆ ಕೂಗಿದರು. ಈ ವೇಳೆ ಡಿಕೆ ಶಿವಕುಮಾರ್ ಏನು ಪ್ರತಿಕ್ರಿಯಿಸದೆ ಸೈಲೆಂಟಾಗಿದ್ದರು.
ಹೌದು ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಈ ಹೊತ್ತಿನಲ್ಲೇ ಮುಖ್ಯಮಂತ್ರಿ ಸ್ಥಾನ ಕುರಿತಾದ ಚರ್ಚೆ ಆರಂಭವಾಗಿದೆ. ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ವೇಳೆ ಸಿಎಂ ಸಿದ್ದರಾಮಯ್ಯ ಮುಂದಿನ ಮೂರುವರೆ ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಅವರ ಪರವಾಗಿ ಪ್ರಚಾರಕ್ಕೆ ತೆರಳಿದ್ದರು.ಈ ವೇಳೆ ಅವರ ಬೆಂಬಲಿಗರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಅಂತ ಘೋಷಣೆ ಕೂಗಿದರು.ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭಾಷಣಕ್ಕೆ ಆಹ್ವಿಸುವ ವೇಳೆ ಕೂಡ ಮುಖ್ಯಮಂತ್ರಿ ಕೂಗು ಕೇಳಿಬಂತು. ಹೌದು, ಕಾಂಗ್ರೆಸ್ ಮುಖಂಡ ಪ್ರಮೋದ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಲು ಆಗಮಿಸುತ್ತಿದ್ದಾರೆ ಎಂದು ಹೇಳಿದರು.