ಬೆಳಗಾವಿ: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ವಿನಯ್ ಗುರೂಜಿ ಅವರು ಗುರುಗಳ ದಯೆಯಿಂದ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ವಿನಯ್ ಗುರೂಜಿ ಅವರು, ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತ ಯೋಗವಿದೆ. ಗುರುಗಳ ದಯೆ, ಬಲದಿಂದ ಮುಖ್ಯಮಂತ್ರಿ ಆಗಲಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಇಚ್ಚೆಯಾಗಿದೆ. ಗುರುಗಳ ದಯೆಯಿಂದ ಅವರು ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಡಿ.ಕೆ. ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಸಿಎಂ ಆದರೆ ನಾನು ಖುಷಿಪಡುತ್ತೇನೆ. ನಾಟಕ ಇಲ್ಲದ ರಾಜಕಾರಣಿ ಅವರು, ಅವರಿಗೆ ನಾಟಕ ಮಾಡಲು ಬರುವುದಿಲ್ಲ. ವೈಕುಂಠ ಏಕಾದಶಿ ದಿನ ಡಿಕೆಶಿ ಸಿಎಂ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮಿಳುನಾಡಿನಲ್ಲಿ ಟೆಂಪಲ್ ರನ್ ನಡೆಸುತ್ತಿದ್ದಾರೆ. ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.