ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ, 5 ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬಗ್ಗೆ ಶಾಸಕ ಗವಿಯಪ್ಪ ಅಪಸ್ವರ ಎತ್ತುತ್ತಿರುವ ವಿಚಾರವಾಗಿ, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ ಎಂದರು.
ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.