ಬೆಂಗಳೂರು : ರಾಜ್ಯದಲ್ಲಿ ಕೊರೊನ ರೂಪಾಂತರ ಹೊಸ ತಳಿ ವೈರಸ್ ಹರಡುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಸುಮಾರು 80ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ವಿಷಯದ ಕುರಿತು ಸಿಎಂ ಸಿದ್ದರಾಮಯ್ಯ ಕೊರೊನ ವೈರಸ್ ಬಗ್ಗೆ ಯಾವುದೇ ನಿರ್ಲಕ್ಷ ವಹಿಸಬೇಡಿ, ಅನಾರೋಗ್ಯ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ.ಕೆಮ್ಮು, ಶೀತ, ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ ಎಂದರು.