ಬೆಂಗಳೂರು : ನಿನ್ನೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಲವು ವಿಚಾರಗಳು ಕುರಿತು ಚರ್ಚಿಸಿದ್ದು ಈ ವೇಳೆ ರಾಜೀನಾಮೆ ವಿಚಾರವಾಗಿ ನನಗೆ ಸ್ವಲ್ಪ ದಿನ ಕಾಲಾವಕಾಶ ಬೇಕು ಎಂದು ಕೇಳಿದಾಗ ರಾಹುಲ್ ಗಾಂಧಿ ಅವರ ಮನವಿಯನ್ನು ಸರಸಾಗಾಟವಾಗಿ ನಿರಾಕರಿಸಿದ್ದಾರೆ.
ರಾಹುಲ್ ಗಾಂಧಿ ಮಾನವೊಲಿಕೆಗೆ ಸಿದ್ದರಾಮಯ್ಯ ಯತ್ನ ಮಾಡಿದ್ದು, ಚಿಂತನೆಗೆ ಕಾಲಾವಕಾಶ ನೀಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು ಕನಿಷ್ಠ 15 ದಿನ ಕಾಲಾವಕಾಶ ನೀಡಿ ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಜಾತಿಗಣತಿ ವರದಿ ಅನುಷ್ಠಾನ ನನ್ನ ಕನಸು ಜಾದಿಗಣತಿ ವರದಿ ಸ್ವೀಕರಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು.
ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರ ಮನವಿ ನಿರಾಕರಿಸಿದ್ದಾರೆ. ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ ಎರಡು ದಿನಗಳಲ್ಲಿ ರಾಜೀನಾಮೆ ನೀಡಿ ಎಂದು ಖಡಕ್ ಸೂಚನೆ ಕೊಟ್ಟಾಗ ಸಿದ್ದರಾಮಯ್ಯ ರಾಹುಲ್ ಗಾಂಧಿ ಮಾತಿಗೆ ಸಮ್ಮತಿ ಸೂಚಿಸಿದ್ದಾರೆ.








