ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ನೀಡಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲೇ ಔಷಧಿ ಚೀಟಿಯನ್ನು ಬರೆದು ಮಾದರಿಯಾಗಿದ್ದಾರೆ.
ಹೌದು, ಬೆಂಗಳೂರಿನ ಕೆ.ವಿ.ಡೆಂಡಲ್ ಕ್ಲಿನಿಕ್ ಆಸ್ಪತ್ರೆಯ ವೈದ್ಯ ಡಾ.ಹರಿಪ್ರಸಾದ್ ಸಿ.ಎಸ್. ಎಂಬುವರು ಔಷಧಿ ಚೀಟಿಯನ್ನು ಕನ್ನಡದಲ್ಲೇ ಬರೆದುಕೊಟ್ಟು ಮಾದರಿಯಾಗಿದ್ದಾರೆ. ಈಗಾಗಲೇ ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ಆದೇಶ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ರಾಜ್ಯಾದ್ಯಂತ ಆದೇಶ ಹೊರಡಿಸಲಾಗುವುದು. ವೈದ್ಯರಿಗೆ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಬರದಿದ್ದರೆ, ಪ್ರಾಧಿಕಾರಿಂದ ಕಲಿಕಾ ಕೇಂದ್ರ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಡಾಕ್ಟರ್ ಗೆ ನಿಮ್ಮ ಮೆಚ್ಚುಗೆ ನುಡಿ ಹೇಳಲು ಈ ಸಂಖ್ಯೆಗೆ ಕರೆ ಮಾಡಿ: +919844265371