ಬೆಂಗಳೂರು : ಸದ್ಯ ರಾಜ್ಯದಲ್ಲಿ ವಕ್ಫ್ ವಿವಾದ ಬೆನ್ನಲ್ಲೆ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಇದರಿಂದ ರಾಜ್ಯದ ಅರ್ಹ ಬಿಪಿಎಲ್ ಕಾರ್ಡ್ ಗಳು ಸಹ ಕ್ಯಾನ್ಸಲ್ ಆಗಿವೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೆಎಚ್ ಮುನಿಯಪ್ಪ ಅವರಿಗೆ ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ದಾರರನ್ನು ತಪ್ಪಿಸಬೇಡಿ ಕಾರ್ಡ್ ಒದಗಿಸಿ ಎಂದು ಸೂಚನೆ ನೀಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುನಿಯಪ್ಪಗೆ ಅದಕ್ಕೆ ಹೇಳಿದ್ದೇನೆ, ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ ನವರನ್ನು ತಪ್ಪಿಸಬೇಡಿ. ಯಾರು ಶ್ರೀಮಂತರು? ಯಾರು ಸರ್ಕಾರಿ ನೌಕರರು ಯಾರು? ಇನ್ಕಮ್ ಟ್ಯಾಕ್ಸ್ ಕಟ್ಟುತ್ತಾರೆ ಅವರು ಬಿಪಿಎಲ್ ಕಾರ್ಡಿಗೆ ಅರ್ಹರಲ್ಲ.
ಬಿಪಿಎಲ್ ಕಾರ್ಡ್ ಹೊಂದಿದವರು ಒಬ್ಬರೇ ಒಬ್ಬರು ಕೂಡ ಬಿಟ್ಟು ಹೋಗಬಾರದು. ಅರ್ಹರು ಅರ್ಜಿ ಕೊಟ್ಟರೆ ಅಂತವರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ. ಬಿಜೆಪಿಯಿಂದ ನಾವು ಪಾಠ ಕಲಿಯಬೇಕಾಗಿಲ್ಲ.ಕೆಲವರು ಬಿಪಿಎಲ್ ಕಾರ್ಡ್ ರದ್ದು ಅಂತ ಹೇಳುತ್ತಿದ್ದಾರೆ. ನಾವು ಬಿಪಿಎಲ್ ರದ್ದು ಮಾಡುತ್ತಿದ್ದೀವಾ? ಇಲ್ಲ ಯಾವುದೇ ಕಾರಣಕ್ಕೂ ರದ್ದು ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.