ಮೈಸೂರು : ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ. ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಅಂತಿದ್ದಾರೆ ಆದರೆ ಅವರಿಂದಲೇ ಕಿತ್ತು ಅವರಿಗೆ ಕೊಡುವ ಕೆಲಸ ನಡೆಯುತ್ತಿದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವರಾದಂತಹ ಎಚ್ ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಧ್ಯಮ ವರ್ಗದ ಜನರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಅತ್ತೆಯ ಆಸ್ತಿಯನ್ನು ಅಳಿಯ ದಾನ ಮಾಡಿದ ಎಂದಂತೆ ಆಗಿದೆ. ಅವರಿಂದ ಕಿತ್ತು ಅವರಿಗೆ ಕೊಡಲು ಇವರೇ ಆಗಬೇಕಾ? ಸರ್ಕಾರ ಗ್ಯಾರಂಟಿ ನಿಲ್ಲಿಸಲು ಕಾರಣ ಹುಡುಕುತಿದೆ. ಗ್ಯಾರಂಟಿ ನಿಲ್ಲಿಸಲು ಏನಾದರೂ ನೆಪ ಹುಡುಕುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಡಿ ಅಂತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಂದಲೇ ಕಿತ್ತುಕೊಂಡು ಅವರಿಗೆ ಕೊಡುವ ಕೆಲಸ ಮಾಡಬಾರದು.
ಕಾಂಗ್ರೆಸ್ ಸರ್ಕಾರದಲ್ಲಿ ಲಂಚದ ಪ್ರಮಾಣ ಶೇಕಡ 60ರಷ್ಟು ಹೆಚ್ಚಾಗಿದೆ. ಇದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ. ಬಡವರಿಗೆ ಮನೆಗಳ ಹಂಚಿಕೆಯಲ್ಲೂ ಲಂಚ ಪಡೆಯಲಾಗುತ್ತಿದೆ. ಈ ಮೊದಲು ಗ್ರಾಮ ಪಂಚಾಯಿತಿ ಪಿಡಿಒಗಳು ಲಂಚ ಪಡೆಯುತ್ತಿದ್ದರು. ಈಗ ವಿಧಾನ ಸೌಧದಲ್ಲಿ ಸಚಿವರು ಅಲಂಚ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಸತ್ಯಮೇವ ಜಯತೆ ಮಾತಿನಂತೆ ಸಿದ್ದರಾಮಯ್ಯ ನಡೆದುಕೊಳ್ಳುತ್ತಿದ್ದಾರಾ? ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆತ್ಮಕ್ಕೆ ತಾವೇ ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ವಾ? ಗುತ್ತಿಗೆದಾರರು ಹಿಂದಿನ ಬಿಜೆಪಿ ಸರ್ಕಾರವೇ ಚೆನ್ನಾಗಿತ್ತು ಅಂತ ಹೇಳುತ್ತಿದ್ದಾರೆ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಇದಕ್ಕೆ ತಕ್ಕ ಬೆಲೆ ತರಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.