Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ : ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ.!
KARNATAKA

BIG NEWS : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ : ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ.!

By kannadanewsnow57

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರಿದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಜಿಲ್ಲಾಧಿಕಾರಿಗಳು ಗದಗ, ಜಿಲ್ಲಾಧಿಕಾರಿಗಳು ಹಾವೇರಿ ಮತ್ತು ಜಿಲ್ಲಾಧಿಕಾರಿಗಳು ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಕಟಿತ ಕರಡು ಮತದಾರರ ಪಟ್ಟಿಯು ಬೆಂಗಳೂರು ಚುನಾವಣಾಧಿಕಾರಿ ಅವರ ವೆಬ್ಸೈಧಟ್ www.ceokarnatake.kar.nic.in ನಲ್ಲಿ ಹಾಗೂ ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದ ವೆಬ್ಸೈೈಟ್ https://rcbelagavi.karnataka.gov.in ನಲ್ಲಿ ಲಭ್ಯವಿರುತ್ತದೆ.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಅರ್ಹ ಪಧವೀದರರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಸಲ್ಲಿಸಬಹುದು.

ಅರ್ಹ ಪ್ರತಿಯೊಬ್ಬ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಲು ಮತ್ತು ಕರಡು ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ, ಹೆಸರು ತೆಗೆದು ಹಾಕಲು ಹಾಗೂ ಕರಡು ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ ಮತದಾರರ ನೋಂದಣಿ ನಿಯಮಗಳು 1960 ರ ಪ್ರಕಾರ ಸೂಕ್ತವಾಗಿರುವ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ, ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರಷರು, 30,743 ಮಹಿಳೆಯರು ಸೇರಿದಂತೆ ಒಟ್ಟು 74,316 ಮತದಾರರು ಇದ್ದಾರೆ.

BIG NEWS: Draft voters list for Karnataka West Graduates' constituency published: Check your name in the list!
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.