ಬೆಂಗಳೂರು : ಬಹಳ ಕಾತುರದಿಂದ ಕಾಯುತ್ತಿದ್ದ ಬೆಂಗಳೂರು ಜನತೆಗೆ ಇದೀಗ ಸಿಹಿಸುದ್ದಿಯೊಂದು ಬಂದಿದ್ದು, ಚೀನಾದಿಂದ ಹಳದಿ ಮೆಟ್ರೋ ಕೊನೆಗೂ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತಲುಪಿದೆ.
ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ 6 ರೈಲಿನ ಕೋಚ್ಗಳು ಸುರಕ್ಷಿತವಾಗಿ ಹೆಬ್ಬಗೋಡಿ ಡಿಪೋಗೆ ತಲುಪಿರುವುದಾಗಿ ‘ನಮ್ಮ ಮೆಟ್ರೋ’ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ತಿಳಿಸಿದೆ. ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗಕ್ಕಾಗಿ ಚೀನಾದಿಂದ ಈ ರೈಲಿನ ಬೋಗಿಗಳನ್ನು ತರಿಸಲಾಗಿದೆ.
ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಹಳದಿ ಮಾರ್ಗ ಪ್ರಮುಖ ಮೆಟ್ರೋ ಕಾರಿಡಾರ್ ಆಗಿದ್ದು, ದಕ್ಷಿಣ ಬೆಂಗಳೂರನ್ನು ಎಲೆಕ್ಟ್ರಾನಿಕ್ ಸಿಟಿಯೊಂದಿಗೆ ಸಂಪರ್ಕಿಸುತ್ತದೆ.
ಟ್ರ್ಯಾಕ್ನಲ್ಲಿ ಚಲಿಸುವ ಮೊದಲು ಕೆಲವೊಂದು ಪರೀಕ್ಷೆಗಳನ್ನು ನಡೆಸಬೇಕಿದೆ. ಇದಾದ ಬಳಿಕ ಟ್ರ್ಯಾಕ್ನಲ್ಲಿ 15 ಪರೀಕ್ಷೆಗಳನ್ನು ಮಾಡಬೇಕಿದೆ. ನಂತರ ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ, ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿಯಿಂದ ಅನುಮೋದನೆ ಅಗತ್ಯವಿದೆ.
ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಕೋಲಾಹಲ : ಮೊಳಗಿದ ಜೈ ಶ್ರೀ ರಾಮ್ ಘೋಷಣೆ
BIG NEWS : ಮೋದಿ ಸರ್ಕಾರ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ : ರೈತ ಸಂಘಟನೆಗಳು ಕಿಡಿ