ಬೆಂಗಳೂರು : ದೂರದ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ, ಪಶ್ಚಿಮ ಬಂಗಾಳದ ಓರ್ವ ಡ್ರಗ್ ಪೆಡ್ಲರ್ ನನ್ನು ಇದೀಗ ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂದಿದ್ದರಿಂದ 20 ಲಕ್ಷ ಮೌಲ್ಯದ 14 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಪ್ರೇಮ್ ಶರ್ಪ (25) ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಠಾಣೆ ಪೋಲೀಸರು 20 ಲಕ್ಷ ರೂಪಾಯಿ ಮೌಲ್ಯದ 14 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಪ್ರೇಮ್ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜೆನೆಟ್ ಜಿಗಣಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಬಳಿಕ ಆರೋಪಿಯನ್ನು ಅರೆಸ್ಟ್ ಮಾಡಿದ್ದು ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.