ಬೆಂಗಳೂರು : ರಾಮನಗರದಲ್ಲಿ ಒಂದುವರೆ ಕೋಟಿ ಮೌಲ್ಯದ 750 ಗ್ರಾಂ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರದ ಐಜೂರು ಠಾಣೆ ಪೊಲೀಸ್ರು ಈ ಒಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ವಿದೇಶಿ ಪ್ರಜೆ ಸೇರಿ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತರಿಂದ 450 ಎಮ್‌ಡಿಎಮ್ಎ ಮಾತ್ರೆಗಳು ಹಾಗೂ 550 ಗ್ರಾಂ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಗೋರಿಪಾಳ್ಯದ ಸಲ್ಮಾನ್, ಸಾಧಿಕ್ ಮತ್ತು ಉಗಾಂಡಾ ಮೂಲದ ನಾನಾ ಜಾನ್ಸನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.








