ಬೆಂಗಳೂರು:ಬೆಂಗಳೂರಿನ ರಸ್ತೆಗಳಲ್ಲಿ ಮತ್ತೆ ಡಬ್ಬಲ್ ಡೆಕ್ಕರ್ ಬಸ್ಸುಗಳು ಓಡಾಡುತ್ತವೆ.ಹತ್ತು ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್ ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಡಬಲ್ ಡೆಕ್ಕರ್ ಬಸ್‌ಗಳಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪೂರ್ಣವಾಗಲಿದೆ .ಮೂಲಗಳ ಪ್ರಕಾರ ಫೆಬ್ರವರಿ 13 ರಂದು ಟೆಂಡರ್ ಪ್ರಾರಂಭವಾಗುವ ಸಾಧ್ಯತೆ ಇದೆ.
ಅಂಡರ್‌ಪಾಸ್ ಮತ್ತು ಇತರ ಅಡೆತಡೆಗಳಲ್ಲಿ ಡಬಲ್ ಡೆಕ್ಕರ್ ಬಸ್‌ಗಳಿಗೆ ಸಂಚರಿಸಲು ಕಷ್ಟವಾಗುತ್ತದೆ. ಆದ್ದರಿಂದ ಇದಕ್ಕೆ ಪರಿಹಾರವಾಗಿ ಈಗಾಗಲೇ ಐದುಮಾರ್ಗ ರೂಪಿಸಲಾಗಿದೆ. ಈ ಡಬಲ್ ಡೆಕ್ಕರ್ ಬಸ್‌ಗಳಿಗೆ ಬಿಎಂಟಿಸಿ ಬಸ್ನ ಬಣ್ಣವೇ ಇರಲಿದೆ. ಆದರೆ ವಿನ್ಯಾಸದ ಬಗ್ಗೆ ಶೀಘ್ರದಲ್ಲೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
ಈ ಬಸ್‌ಗಳಲ್ಲಿ ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಪ್ಯಾಸೆಂಜರ್ ಡಿಸ್‌ಪ್ಲೇ ಬೋರ್ಡ್‌ಗಳು, ಸಿಸಿಟಿವಿ ವ್ಯವಸ್ಥೆಗಳು ಮತ್ತು ಪ್ಯಾನಿಕ್ ಬಟನ್‌ಗಳನ್ನು ಅಳವಡಿಸಲಾಗಿದೆ.