ಮಂಡ್ಯ : ನಿನ್ನೆ ಮಂಡ್ಯ ಜಿಲ್ಲೆಯ ನಂಜನಗೂಡು ತಾಲೂಕಿನ ಕೂತ್ತುನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, CET ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರಿಂದ ಮನನೊಂದ ತಾಯಿಯು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಕೊತ್ತನಹಳ್ಳಿ ಗ್ರಾಮದ ಜಯರಾಮ ಅವರ ಪತ್ನಿ ಮಹಾದೇವಮ್ಮ (45), ಮಗಳು ಪ್ರಿಯಾ (20) ಆತ್ಮಹತ್ಯೆಗೆ ಶರಣಾದವರು.ಪ್ರಿಯಾ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದು, ಸಿಇಟಿ, ಎನ್ಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಳು. ಮಗಳನ್ನು ತುಂಬಾ ಪ್ರೀತಿಸುತ್ತಿದ್ದ ತಾಯಿ ಮಹಾದೇವಮ್ಮ ಮಗಳ ಸಾವನ್ನು ಕಂಡು ಆಕೆಯೂ ಸಹ ಮಗಳ ಶವದ ಪಕ್ಕದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.