ಕೊಪ್ಪಳ : ಒಂದು ಕಡೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಹೇಳಿಕೆ ನೀಡಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಸಿಎಂ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದರು.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದಿದೆ. ಕೊಪ್ಪಳದಲ್ಲಿ ಬಿಜೆಪಿ ಇದನ್ನು ಹೇಳಿದರೆ ಭವಿಷ್ಯ ನುಡಿಯುತ್ತಾರಾ ಅಂತ ಕೇಳುತ್ತಾರೆ. ಆದರೆ ನಮಗೆ ಸಿದ್ದರಾಮಯ್ಯ ಮೇಲೆ ಯಾವುದೇ ದ್ವೇಷವಿಲ್ಲ. ರಾಜ್ಯದ ಜನರು ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಆಡಳಿತ ಪಕ್ಷದ ಶಾಸಕರಿಗೂ ಇದೇ ಭಾವನೆ ಇದೆ ಎಂದರು.
ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಮೊನ್ನೆ 10 ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದಾರೆ. ಆದರೆ 10 ಕೋಟಿ ಹಣ ನಮ್ಮ ಕ್ಷೇತ್ರಕ್ಕೆ ಬರಲು ಎಷ್ಟು ತಿಂಗಳು ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರವಿದೆ. ಶಾಸಕರು ತಮ್ಮ ಕ್ಷೇತ್ರದಲ್ಲಿ ಓಡಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ ಎಂದು ಕಿಡಿ ಕಾರಿದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದಾರೆ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯ ಪರಿಣಾಮವಿದು. ಆಡಳಿತ ಪಕ್ಷದಲ್ಲಿ ನಾನು ಅನ್ನೋದು ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಗುಲಾಬಿ ಶುರುವಾಗಿದೆ. ಡಿಸಿಎಂ ಅಡಿಕೆ ಶಿವಕುಮಾರ್ ಸೇರಿದಂತೆ ಅನೇಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ ಜನಪರ ಸರ್ಕಾರವಲ್ಲ ಇದು ಕಮಿಷನ್ ಸರ್ಕಾರ ಎಂದು ಕೊಪ್ಪಳದಲ್ಲಿ ಕಾಂಗ್ರೆಸ್ ವಿರುದ್ಧ ಬಿವೈ ವಿಜಯೇಂದ್ರ ವಾಗಿ ನಡೆಸಿದರು.