ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಹೆಸರು ಹೇಳುವಂತೆ ತಮಗೆ ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇ.ಡಿ. ಅಧಿಕಾರಿಗಳ ವಿರುದ್ಧವೇ ದೂರು ದಾಖಲಾಗಿದೆ.
ಹೌದು ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಬಿ.ನಾಗೇಂದ್ರ ಹೆಸರು ಹೇಳುವಂತೆ ತಮಗೆ ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಗ್ಯ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.
ಇ.ಡಿ. ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ವಿರುದ್ಧ ಆರೋಪ ಬಂದಿದ್ದು, ಈ ಸಂಬಂಧ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಬಿ. ಕಲ್ಲೇಶ್ ದೂರು ಸಲ್ಲಿಸಿದ್ದಾರೆ.