Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಕ್ಕೆ `ಅತಿಥಿ ಉಪನ್ಯಾಸಕರ’ ನೇಮಕಾತಿ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯ ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಕ್ಕೆ `ಅತಿಥಿ ಉಪನ್ಯಾಸಕರ’ ನೇಮಕಾತಿ : ಶಿಕ್ಷಣ ಇಲಾಖೆ ಆದೇಶ.!

By kannadanewsnow5731/12/2024 6:24 AM

ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ?

2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಉಲ್ಲೇಖ-(1) ರಂತೆ ಸರ್ಕಾರದ ನಿರ್ದೇಶನದನ್ವಯ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿತ್ತು.

ಆದರೆ, ಇಲಾಖೆಯಲ್ಲಿ ಖಾಯಂ ಉಪನ್ಯಾಸಕರ ಸಾಮಾನ್ಯ ಮತ್ತು ವಿಶೇಷ ವರ್ಗಾವಣೆ ಪ್ರಕ್ರಿಯೆ ನಂತರ ಅವರು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿರುವುದರಿಂದ ಹಾಗೂ ಹೊಸದಾಗಿ ನೇಮಕಾತಿ / ಸ್ಥಳ ನಿಯುಕ್ತಿ ಹೊಂದಿದ ಉಪನ್ಯಾಸಕರು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿರುವುದರಿಂದ ಕಾಲೇಜುಗಳಲ್ಲಿ ಬೋಧನಾ ಕಾರ್ಯಭಾರದ ಹೆಚ್ಚಳ/ಕೊರತೆ ಉಂಟಾಗಲಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024-25ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಕೌನ್ಸಿಲಿಂಗ್ ನಡೆಸುವವರೆಗೆ ಈ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಆಯ್ಕೆಗೊಂಡು EMIS ನಲ್ಲಿ Upload ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ / ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಕರ ಸೇವೆಯನ್ನೂ ಒಳಗೊಂಡಂತೆ) ಸೇವೆಯನ್ನು ತಾತ್ಕಾಲಿಕವಾಗಿ ಕಾಲೇಜಿನಲ್ಲಿ ಹಾಲಿ ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಬಳಸಿಕೊಳ್ಳುವಂತೆ ಉಲ್ಲೇಖ-(2) ರ ಈ ಕಛೇರಿಯ ಸುತ್ತೋಲೆಯಲ್ಲಿ ಸೂಚಿಸಲಾಗಿತ್ತು.

ಪ್ರಸ್ತುತ 1, 3 & 5 ಸೆಮಿಸ್ಟರ್ ಅವಧಿಯು ಮುಕ್ತಾಯಗೊಂಡಿರುವ / ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನ 2, 4 & 6ನೇ ಸೆಮಿಸ್ಟರ್ ಅವಧಿಗೆ ಲಭ್ಯವಿರುವ / ಲಭ್ಯವಾಗುವ ಕಾರ್ಯಭಾರದ ಮಾಹಿತಿಯನ್ನು ದಿನಾಂಕ:04.01.2025 ರ ಸಂಜೆ 5:00 ಗಂಟೆಯೊಳಗಾಗಿ ಇಲಾಖೆಯ EMIS ನಲ್ಲಿ ಕಡ್ಡಾಯವಾಗಿ Upload ಮಾಡಲು ಎಲ್ಲಾ ಪ್ರಾಂಶುಪಾಲರುಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಬೋಧನಾ ಕಾರ್ಯಭಾರದ ವಿವರಗಳನ್ನು EMIS ನಲ್ಲಿ Upload ಮಾಡುವಾಗ, ಆಯಾ ವಿಷಯಗಳಲ್ಲಿ ನಿಯಮಾನುಸಾರ ಕನಿಷ್ಠ ವಿದ್ಯಾರ್ಥಿಗಳ ಸಂಖ್ಯೆಯ ಪ್ರಮಾಣವು ಉಲ್ಲಂಘನೆಯಾಗದಂತೆ, ಸಾಮಾನ್ಯ ವರ್ಗಾವಣೆ / ವಿಶೇಷ ವರ್ಗಾವಣೆ ಮತ್ತು ಹೊಸದಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿರುವ ಉಪನ್ಯಾಸಕರುಗಳಿಗೆ ನಿಯಮಾನುಸಾರ ಬೋಧನಾ ಕಾರ್ಯಭಾರವು ಹಂಚಿಕೆಯಾಗಿ, ನಂತರದಲ್ಲಿ ಉಳಿಕೆಯಾಗುವ ಕಾರ್ಯಭಾರದ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ ಬೋಧನಾ ಕಾರ್ಯಭಾರದ ವಿವರಗಳನ್ನು ತಪ್ಪಾಗಿ Upload ಮಾಡಿದಲ್ಲಿ ಅಂತಹ ಪ್ರಾಂಶುಪಾಲರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

2024-25ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕುರಿತು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗುವುದು.

 

BIG NEWS : ರಾಜ್ಯ ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಕ್ಕೆ `ಅತಿಥಿ ಉಪನ್ಯಾಸಕರ' ನೇಮಕಾತಿ : ಶಿಕ್ಷಣ ಇಲಾಖೆ ಆದೇಶ.! Education department orders appointment of 'guest lecturers' for additional teaching work in state government colleges
Share. Facebook Twitter LinkedIn WhatsApp Email

Related Posts

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

03/02/2026 9:19 PM2 Mins Read

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM1 Min Read

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM3 Mins Read
Recent News

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM

Good News ; PF ಖಾತೆ ಹೊಂದಿರುವವರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ ; ಈಗ 8 ದಿನಗಳಲ್ಲಿ ಖಾತೆಗೆ ಹಣ ಜಮಾ!

03/02/2026 9:31 PM
State News
KARNATAKA

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow5703/02/2026 9:19 PM KARNATAKA 2 Mins Read

ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ…

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM

BREAKING : ಗದಗದಲ್ಲಿ ಘೋರ ದುರಂತ : ಮನೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು.!

03/02/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.