ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಸೊಳ್ಳೆಕೊಡಿ, ಚಿನ್ನಪ್ಪ (70) ಇದೀಗ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ವೃದ್ಧನ ಮೇಲೆ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪುವಯ್ಯ ಭೇಟಿ ನೀಡಿದ್ದಾರೆ. ಎರಡು ದಿನಗಳಲ್ಲಿ ಕಾಡಾನೆಗಳಿಗೆ ಇಬ್ಬರು ಬಲಿಯಾಗಿದ್ದಾರೆ. ಪಾಲಿ ಬೆಟ್ಟದಲ್ಲಿ ನಿನ್ನೆ ಕಾಡಾನೆ ವ್ಯಕ್ತಿ ಒಬ್ಬನನ್ನು ಬಲಿ ಪಡೆದಿತ್ತು.