ಬೆಂಗಳೂರು : ಜೂನ್ 30 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ( ಐದು ಪಾಲಿಕೆ) ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಫೆಬ್ರವರಿ 20 ರೊಳಗೆ ವಾರ್ಡ್ ಗಳ ಮರುವಿಂಗಡನೆ ಪೂರ್ಣಗೊಳಿಸಿ ಮಾರ್ಚ್ 16 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲು ಆದೇಶ. ಶಾಲಾ ವಿದ್ಯಾರ್ಥಿಗಳ ಪರೀಕ್ಷೆ ಪೂರ್ಣಗೊಂಡ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭಿಸಿ ಜೂನ್ 30 ರೊಳಗೆ ಚುನಾವಣೆ ನಡೆಸಲು ಆದೇಶ ನೀಡಿದೆ.
ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು 2020ರ ಸೆಪ್ಟೆಂಬರ್ 10ರಂದು ಮುಗಿದಿತ್ತು. ಆರು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಅಮಾನತಿನಲ್ಲಿ ಇರಿಸಿತ್ತು. ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ– 2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.








