Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧುರಂಧರ್ 2′ ಎಫೆಕ್ಟ್: ಪಾಕಿಸ್ತಾನದಲ್ಲಿ ಹರಡಿತು ಭಾರತೀಯ ಗೂಢಚಾರರ ಭೀತಿ; ಲಿಯಾರಿಯಲ್ಲಿ ಪೊಲೀಸರಿಂದ ತೀವ್ರ ಶೋಧ!

24/03/2026 12:11 PM

BIG NEWS : ಹಿಂದೂ, ಬೌದ್ಧ, ಸಿಖ್ ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ `SC’ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

24/03/2026 12:06 PM

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ : ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ.!
KARNATAKA

BIG NEWS: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ : ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ.!

By kannadanewsnow5704/05/2025 6:20 AM

ಬೆಂಗಳೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್‌ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್‌ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ… pic.twitter.com/OtfVyG8LyF

— DIPR Karnataka (@KarnatakaVarthe) May 3, 2025

ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಶಾಂತಿಯನ್ನು ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ‌ ಮಾಡುತ್ತೇನೆ. ಸರ್ಕಾರ ಮತ್ತು‌ ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ‌ ಕಾಪಾಡಲು ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ‌ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ನಿನ್ನೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ‌. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಂಡಿದ್ದು, ಬೆಳೆಯಲು ಬಿಡುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು‌.

ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು‌ ಪ್ರಕಾರ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಇದನ್ನು ಬಿಡುವುದಿಲ್ಲ ಎಂದು ಹೇಳಿದರು

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

BIG NEWS: Establishment of anti-communal violence force in Dakshina Kannada and Udupi districts: Home Minister Dr. G Parameshwara announces.!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM1 Min Read

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

24/03/2026 11:33 AM2 Mins Read
Recent News

ಧುರಂಧರ್ 2′ ಎಫೆಕ್ಟ್: ಪಾಕಿಸ್ತಾನದಲ್ಲಿ ಹರಡಿತು ಭಾರತೀಯ ಗೂಢಚಾರರ ಭೀತಿ; ಲಿಯಾರಿಯಲ್ಲಿ ಪೊಲೀಸರಿಂದ ತೀವ್ರ ಶೋಧ!

24/03/2026 12:11 PM

BIG NEWS : ಹಿಂದೂ, ಬೌದ್ಧ, ಸಿಖ್ ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ `SC’ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

24/03/2026 12:06 PM

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM

BIG NEWS : ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ `SC-ST’ ಮೀಸಲಾತಿ ಪಡೆಯಲು ಅರ್ಹನಲ್ಲ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು !

24/03/2026 11:59 AM
State News
KARNATAKA

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

By kannadanewsnow5724/03/2026 12:04 PM KARNATAKA 1 Min Read

ವಿಧಾನಪರಿಷತ್ತು, ಮಾ.23: ಮೀಸಲು ಅರಣ್ಯ, ಪರಿಭಾವಿತ ಅರಣ್ಯ, ಸೆಕ್ಷನ್ 4 ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು…

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

24/03/2026 11:33 AM

ಮಾಂಸ ಪ್ರಿಯರಿಗೆ ಬಿಗ್ ಶಾಕ್ : ಚಿಕನ್, ಮಟನ್ ಬೆಲೆಯಲ್ಲಿ ಭಾರಿ ಏರಿಕೆ | Meat price hike

24/03/2026 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.