ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದ ಬಿಜೆಪಿ ಶಾಸಕ ಮುನಿರತ್ನ, ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಜೈಲು ಸೇರಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಸಾಕ್ಷಿ ಹೇಳದಂತೆ ಅವರ ಬೆಂಬಲಿಗರು ಜೀವ ಬೆದರಿಕೆ ಹಾಕಿದರೆ ಎಂಬ ಆರೋಪದ ವಿಚಾರವಾಗಿ ಇಂದು ಮಾಜಿ ಕಾರ್ಪೊರೇಟರ್ ವೇಲುನಾಯಕ್ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ್ದಾರೆ.
ಹೌದು ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಮುನಿರತ್ನ ನಾಯ್ಡು ಬೆಂಬಲಿಗರಿಂದ ಜೀವ ಬೆದರಿಕೆ ಹಿನ್ನೆಲೆ ಮಾಜಿ ಕಾರ್ಪೊರೇಟರ್ ವೇಲು ನಾಯಕ್ ಹಾಗೂ ದಲಿತ ಸಂಘಟನೆ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.ದೂರು ನೀಡಿದ್ದವರಿಗೆ ಹಾಗೂ ನಮಗೆ ಜೀವ ಬೆದರಿಕೆ ಕರೆ ಬರುತ್ತಿವೆ. ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ನಮಗೆ ತೊಂದರೆ ಕೊಡುತ್ತಿದ್ದಾರೆ. ಮುನಿರತ್ನ ಆಪ್ತ ಹೆಬ್ಬಗೂಡಿ ಠಾಣೆ ಐ.ಎನ್.ರೆಡ್ಡಿ ಸಸ್ಪೆಂಡ್ ಮಾಡುವಂತೆಯೂ ಸಿಎಂಗೆ ಮನವಿ ಮಾಡಲಾಗಿದೆ.
ಮುನಿರತ್ನ ನಾಯ್ಡು ಆಪ್ತೆ ಸುನಂದಮ್ಮ ನಿನ್ನೆ ಸಾಕ್ಷಿ ಹೇಳುವವರ ಮನೆಗೆ ನುಗ್ಗಿ ಸುನಂದಮ್ಮ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಹಾಕಿದ್ದ ಬಗ್ಗೆ ಸಿಸಿಟಿವಿ ದೃಶ್ಯ ಸಮೇತ ದೂರು ಕೊಟ್ಟಿದ್ದೇವೆ.ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪವೇ ಕೇಳಿ ಬಂದಿದೆ. ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆಯ ಪುತ್ರನಿಗೇ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದರು.