Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 6,000 ಉದ್ಯೋಗಿಗಳನ್ನು ವಜಾ | Microsoft laid off

18/05/2025 9:42 PM

BREAKING: ಸನ್ ರೈಸರ್ಸ್ ಹೈದರಾಬಾದ್ ತಂಡದ ‘ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್’ಗೆ ಕೊರೋನಾ ಪಾಸಿಟಿವ್ | Travis Head

18/05/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ `ಫೇಸ್ ರೆಕಗ್ನಿಷನ್’ ಹಾಜರಾತಿ ವ್ಯವಸ್ಥೆ’ ಜಾರಿ : ಸಚಿವ ಮಧು ಬಂಗಾರಪ್ಪ
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ `ಫೇಸ್ ರೆಕಗ್ನಿಷನ್’ ಹಾಜರಾತಿ ವ್ಯವಸ್ಥೆ’ ಜಾರಿ : ಸಚಿವ ಮಧು ಬಂಗಾರಪ್ಪ

By kannadanewsnow5724/03/2025 10:58 AM

ಶಿವಮೊಗ್ಗ : ಮುಂದಿನ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಇದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬಾರೇಹಳ್ಳ ಜಲಾಶಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎರಡು ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ಅನುಷ್ಟಾನಕ್ಕೆ ತರಲಾಗಿದೆ. ಸರ್ಕಾರದ ಮುಂದಿನ ಅವಧಿಯಲ್ಲಿ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ವಿಶೇಷವಾಗಿ ಶಿಕ್ಷಣ ಇಲಾಖೆಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ನಿರ್ಣಯ ಕೈಗೊಳ್ಳಲಿದೆ. ಪೋಷಕರು ತಮ್ಮ ಮಕ್ಕಳನ್ನು ದಿನನಿತ್ಯ ಶಾಲೆಗೆ ಕಳುಹಿಸಿಕೊಡಬೇಕಲ್ಲದೇ ಅವರನ್ನು ಶಿಕ್ಷಣದ ಮುಖ್ಯವಾಹಿನಿಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ರಾಜ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಇದರೊಂದಿಗೆ ಹಾಯ್ಹೊಳೆಯ ಜಲಾಶಯ ಕಾಮಗಾರಿಯನ್ನು ಮೂರು ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಎಂದರು.

ದೇವರಾಜ ಅರಸುರವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಈ ಜಲಾಶಯಕ್ಕೆ ಕಾಮಗಾರಿ ನಡೆದಿತ್ತು. ಆ ಅವಧಿಯಿಂದ ಹಲವು ದಶಕಗಳು ಕಳೆದಿದ್ದರೂ ಜಲಾಶಯದ ನಿರ್ವಹಣೆ ಅಥವಾ ಮುಂದುವರೆದ ಕಾಮಗಾರಿ ನಡೆಯದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದ ಅವರು, ತುಂಗಾ ಮೇಲ್ದಂಡೆ ಯೋಜನಾ ಶಾಖೆಯಿಂದ 3 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ಆರು ತಿಂಗಳ ಅವಧಿಯೊಳಗಾಗಿ ಮುಕ್ತಾಯಗೊಳಿಸಲು ಸೂಚಿಸಲಾಗಿದೆ. ಮಾಡುವ ಕಾಮಗಾರಿಯೂ ಶಾಶ್ವತವಾಗಿರುವಂತೆ, ಗುಣಮಟ್ಟದ್ದಾಗಿರುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಕಳೆದ ಸಾಲಿನಲ್ಲಿಯೇ ಕೈಗೊಳ್ಳಬೇಕಾಗಿದ್ದ ಕಾಮಗಾರಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿ ಆರಂಭಗೊಳ್ಳುತ್ತಿದೆ. ಈ ಪ್ರದೇಶದ ಜನರ ಕೃಷಿ ಚಟುವಟಿಕೆಗಳಿಗೆ ಅತ್ಯವಶ್ಯಕ ಎಂಬುದನ್ನು ಅರಿತು ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಭಾಗದ ಜನರಿಗೆ ತುರ್ತು ಅಗತ್ಯವೆನಿಸಬಹುದಾದ ಕೆಲಸ-ಕಾರ್ಯಗಳ ಬಗ್ಗೆ ಮಾಹಿತಿ ನೀಡಿದಲ್ಲಿ ಅವುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವುದಾಗಿ ಅವರು ಭರವಸೆ ನೀಡಿದರು.

ಈ ಬಾಗದ ಬಹುದಿನಗಳಿಂದ ಇತ್ಯರ್ಥವಾಗದೆ ಉಳಿದಿರುವ ಶರಾವತಿ ಸಂತ್ರಸ್ಥರು ಹಾಗೂ ಬಗರ್ಹುಕುಂ ಸಾಗುವಳಿದಾರರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದು, ಶೀಘ್ರದಲ್ಲಿ ನಿರೀಕ್ಷಿತ ಫಲಿತಾಂಶ ಬರುವ ನಿರೀಕ್ಷೆಯಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು, ಅದರ ನಿರ್ವಹಣೆಗಾಗಿ ಸಮರ್ಥ ವಕೀಲರೊಬ್ಬರನ್ನು ಸರ್ಕಾರದ ಪರವಾಗಿ ವಾದ ಮಂಡಿಸಲು ನೇಮಿಸಲಾಗಿದೆ. ಅಲ್ಲದೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೂ ಸಹ ಮಾನವೀಯ ನೆಲೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ಯೆಯನ್ನು ಶಾಶ್ವತ ಪರಿಹಾರಗೊಳಿಸಲು ಯತ್ನಿಸಲಾಗಿದೆ. ಸದ್ಯದಲ್ಲಿ ಈ ಭಾಗದ ಸರ್ವೇ ಕಾರ್ಯಕ್ಕೆ ಅಧಿಕಾರಿಗಳು ಬಂದಲ್ಲಿ ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಅವರು ಸೂಚಿಸಿದರು.

ಈ ವಿಷಯದಲ್ಲಿ ದೊರೆಯುವ ನ್ಯಾಯಾಲಯದ ತೀರ್ಪಿನಂತೆ ಚಕ್ರಾ, ವರಾಹಿ ಸೇರಿದಂತೆ ವಿವಿಧ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿದ್ದು, ಸಂತ್ರಸ್ತರೂ ಕೂಡ ಸರ್ಕಾರದೊಂದಿಗೆ ತಾಳ್ಮೆಯಿಂದ ವ್ಯವಹರಿಸುವಂತೆ ಮನವಿ ಮಾಡಿದ ಅವರು, ಶೀಘ್ರದಲ್ಲಿ ಸಂತ್ರಸ್ಥರೆಲ್ಲರಿಗೂ ಹಕ್ಕುಪತ್ರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.

ಸ್ಥಳೀಯ ಜನರ ಅಪೇಕ್ಷೆಯಂತೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇಲ್ಲಿನ ನಿವಾಸಿಗಳು ದೇವಸ್ಥಾನ, ಸಮುದಾಯಭವನಗಳ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಪಡೆಯುವ ಬದಲು ಇಲ್ಲಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಕಲ್ಪ ಮಾಡುವಂತೆ, ಆ ಮೂಲಕ ಒಂದು ಸಮುದಾಯ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆಯುವಂತೆ ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಅವರು ಮಾತನಾಡಿ, ರಾಜ್ಯದ ಅನೇಕ ಭಾಗಗಳಿಗೆ ಬೆಳಕು ನೀಡುವ ಯೋಜನೆಗಾಗಿ ತಮ್ಮೆಲ್ಲವನ್ನು ಕಳೆದುಕೊಂಡು ಕತ್ತಲಲ್ಲಿರುವ ಸಂತ್ರಸ್ಥರ ನೆರವಿಗೆ ಅಂದಿನ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿ.ಎಸ್.ಬಂಗಾರಪ್ಪನವರು ಹಾಗೂ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ನಿರಂತರವಾಗಿ ಶ್ರಮಿಸಿರುವುದನ್ನು ನೆನಪಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ್, ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ನಾಗವೇಣಿ, ಗ್ರಾ.ಫಂ. ಸದಸ್ಯರು ಸೇರಿದಂತೆ ಹಲವು ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

BIG NEWS: 'Face recognition' attendance system to be implemented in all schools in the state from the next academic year: Minister Madhu Bangarappa
Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM1 Min Read

ದಕ್ಷಿಣಕನ್ನಡದಲ್ಲಿ ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ : ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

18/05/2025 9:24 PM1 Min Read

ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

18/05/2025 9:08 PM1 Min Read
Recent News

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 6,000 ಉದ್ಯೋಗಿಗಳನ್ನು ವಜಾ | Microsoft laid off

18/05/2025 9:42 PM

BREAKING: ಸನ್ ರೈಸರ್ಸ್ ಹೈದರಾಬಾದ್ ತಂಡದ ‘ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್’ಗೆ ಕೊರೋನಾ ಪಾಸಿಟಿವ್ | Travis Head

18/05/2025 9:35 PM

ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ನಕಲಿ ಪಾಡ್‌ಕಾಸ್ಟ್‌ಗಳನ್ನು ಹೋಸ್ಟ್ ಮಾಡಿ ಸಿಕ್ಕಿಬಿದ್ದ ಸ್ಪಾಟಿಫೈ: ವರದಿ | Spotify

18/05/2025 9:27 PM
State News
KARNATAKA

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

By kannadanewsnow0918/05/2025 9:59 PM KARNATAKA 1 Min Read

ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ, ಸಾಗರ ಸಮೀಪದ ಕೆಳದಿ ಕೆರೆಯಲ್ಲಿ ಜಲಕ್ರೀಡೆ, ಜಲಸಾಹಸಕ್ಕೆ ಪ್ರವಾಸೋದ್ಯಮ ಇಲಾಖೆ…

ದಕ್ಷಿಣಕನ್ನಡದಲ್ಲಿ ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ : ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

18/05/2025 9:24 PM

ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

18/05/2025 9:08 PM

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ 112 ಸಿಬ್ಬಂದಿ: ಎಲ್ಲಿ.? ಹೇಗೆ ಅಂತ ಈ ಸುದ್ದಿ ಓದಿ!

18/05/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.