ಬೆಳಗಾವಿ : ಈಗಾಗಲೇ ಸರ್ಕಾರವು ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿ, ಅನರ್ಹ ಫಲಾನುಭವಿಗಳ ಕಾರ್ಡ್ಗಳನ್ನು ಬಿಪಿಎಲ್ ಇಂದ ಎಪಿಎಲ್ ಗೆ ಬದಲಾಯಿಸಿವೆ. ಇದರ ಬೆನ್ನಲ್ಲೇ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತದೆ. ನಕಲಿ ಕಾರ್ಡ್ ಹೊಂದಿದವರನ್ನು ಗುರುತಿಸಿ ಅವರ ಕಾರ್ಡುಗಳನ್ನು ರದ್ದು ಮಾಡಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಲಾಖೆಯ ಪ್ರತಿನಿಧಿಗಳು ನಮ್ಮ ಇಲಾಖೆಯಿಂದ ಲಾಭ ಪಡೆದ ಫಲಾನುಭವಿಗಳನ್ನು ಭೇಟಿಯಾಗಿ ಮಾಹಿತಿ ಕಲೆ ಹಾಕಲಿದ್ದಾರೆ. ಜೊತೆಗೆ, ನಕಲಿ ಕಾರ್ಮಿಕ ಕಾರ್ಡ್ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಮಾಡುತ್ತೇವೆ. ನಾಲ್ಕೈದು ತಿಂಗಳಲ್ಲಿ ಶೇ.70 ರಿಂದ 80ರಷ್ಟು ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ಗಳನ್ನು ರದ್ದು ಮಾಡುತ್ತೇವೆ ಎಂದರು.
ಕಾರ್ಮಿಕ ಇಲಾಖೆಯಿಂದ ಅಂಬೇಡ್ಕರ್ ಸೇವಾ ಕೇಂದ್ರ ಎಂಬ ನೂತನ ಕಾರ್ಯಕ್ರಮಕ್ಕೆ ಜನವರಿ ಅಥವಾ ಫೆಬ್ರವರಿಯಲ್ಲಿ ಚಾಲನೆ ಸಿಗಲಿದೆ. ಈಗಾಗಲೇ 58 ಲಕ್ಷ ಇದ್ದ ಕಟ್ಟಡ ಕಾರ್ಮಿಕ ಕಾರ್ಡ್ಗಳನ್ನು 38 ಲಕ್ಷಕ್ಕೆ ತಂದಿದ್ದೇವೆ. ಹಾಗಾಗಿ ಶೀಘ್ರದಲ್ಲಿ ನಮ್ಮ ಇಲಾಖೆಯ ಸಿಬ್ಬಂದಿಗಳು ನಕಲಿ ಕಾರ್ಮಿಕ ಕಾರ್ಡ್ ಗಳನ್ನು ರದ್ದು ಮಾಡಲು 43 ವಿಭಾಗಗಳಲ್ಲಿ 43 ವಾಹನಗಳು ಸಂಚರಿಸಲಿವೆ ಎಂದರು.