BIG NEWS : ಬಾಗಲಕೋಟೆಯಲ್ಲಿ ಭಾರಿ ಮಳೆಗೆ ಪ್ರಸಿದ್ಧ ಬನಶಂಕರಿ ದೇವಸ್ಥಾನ ಜಲಾವೃತ

ಬಾಗಲಕೋಟೆ : ಬಾಗಲಕೋಟೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಕೂಡ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೌದು ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಆವರಣ ಸಂಪೂರ್ಣವಾಗಿ ಜಲಾವೃತವಾಗಿದೆ. ಆದರೂ ಸಹ ಭಕ್ತರು ನೀರಿನಲ್ಲಿ ನಡೆದುಕೊಂಡು ಹೋಗಿ ದೇವಿಯ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ.