Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

“ಅಮೆರಿಕ ತಿಂಗಳುಗಳಿಂದ ಭಾರತವನ್ನ ಬೇಡಿಕೊಳ್ತಿದೆ” : ರಷ್ಯಾದ ತೈಲದ ಕುರಿತು ಟ್ರಂಪ್ ಕಾಲೇಳೆದ ಇರಾನ್

14/03/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ರೈತರೇ ಗಮನಿಸಿ : `ಇ-ಪೌತಿ’ ಮಾಡಿಸಿಕೊಳ್ಳದಿದ್ದರೆ ಇನ್ಮುಂದೆ ಸಿಗಲ್ಲ ಸರ್ಕಾರದ ಈ ಸೌಲಭ್ಯಗಳು.!
KARNATAKA

BIG NEWS : ರಾಜ್ಯದ ರೈತರೇ ಗಮನಿಸಿ : `ಇ-ಪೌತಿ’ ಮಾಡಿಸಿಕೊಳ್ಳದಿದ್ದರೆ ಇನ್ಮುಂದೆ ಸಿಗಲ್ಲ ಸರ್ಕಾರದ ಈ ಸೌಲಭ್ಯಗಳು.!

By kannadanewsnow5706/07/2025 11:28 AM

ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದೆ.

ಹೌದು, ಇ-ಪೌತಿ ಮಾಡಿಸಿಕೊಳ್ಳದೇ ಇದ್ದರೆ ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಇದರ ಸದುಪಯೋಗಪಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.

ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ ಎಂದಿದ್ದಾರೆ.

ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ತಮ್ಮ ಕಾನೂನು ಬದ್ದ ವಾರಸುದಾರರ ಹೆಸರಿಗೆ ಜಮೀನಿನ ಖಾತೆಯನ್ನು ವರ್ಗಾವಣೆ ಮಾಡುವುದನ್ನು ಪೌತಿ ಖಾತೆ ಎನ್ನಲಾಗುವುದು.

ಮನೆ ಬಾಗಿಲಿಗೆ ಹೋಗಿ ಪೌತಿ ಖಾತೆ ಅಭಿಯಾನ ನಡೆಸುತ್ತಿರುವುದರಿಂದ ಅರ್ಹರಿಗೆ ಸುಲಭವಾಗಿ ಪೌತಿ ಖಾತೆ ಲಭ್ಯವಾಗುತ್ತದೆ. ಜಮೀನಿನ ವಾರಸುದಾರಿಕೆಯ ಪಹಣಿ ಸಿಗುತ್ತದೆ.

ಇ-ಪೌತಿ ಆಂದೋಲನಕ್ಕಾಗಿ ಕಂದಾಯ ಇಲಾಖೆಯು ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶವು ವಂಶವೃಕ್ಷದ ಆಧಾರದ ಮೇಲೆ ವಾರಸುದಾರರ ಮಾಹಿತಿಯನ್ನು ಸಂಗ್ರಹಿಸಿ, ಆಧಾರ್ ಸಂಖ್ಯೆಯ ಮೂಲಕ ಒಟಿಪಿ ಪರಿಶೀಲನೆ ನಡೆಸುತ್ತದೆ.

ಈ ಪ್ರಕ್ರಿಯೆಯು ಪೌತಿ ಖಾತೆ ನೋಂದಣಿಯಲ್ಲಿ ಸಂಭವಿಸಬಹುದಾದ ಅಕ್ರಮ ಕಡಿವಾಣ ಹಾಕಲು ಮತ್ತು ರೈತರಿಗೆ ತಮ್ಮ ಆಸ್ತಿಯ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಈ ಯೋಜನೆಯು ಸರಳ ಮತ್ತು ಪಾರದರ್ಶಕ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

BIG NEWS: Farmers of the state take note: If you do not get `e-Pauti' you will no longer be able to avail these government facilities!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM1 Min Read

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM2 Mins Read

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

“ಅಮೆರಿಕ ತಿಂಗಳುಗಳಿಂದ ಭಾರತವನ್ನ ಬೇಡಿಕೊಳ್ತಿದೆ” : ರಷ್ಯಾದ ತೈಲದ ಕುರಿತು ಟ್ರಂಪ್ ಕಾಲೇಳೆದ ಇರಾನ್

14/03/2026 2:32 PM

ಆದಾಯ ತೆರಿಗೆದಾರರೇ ಗಮನಿಸಿ : ಏ.1 ರಿಂದ ಜಾರಿಗೆ ಬರಲಿದೆ ಈ 10 ಹೊಸ ನಿಯಮಗಳು |New Income tax Rules

14/03/2026 2:06 PM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

By kannadanewsnow5714/03/2026 2:59 PM KARNATAKA 1 Min Read

ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಹತ್ತಿರವಾಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಹಿಂದೆ ಅಟಲ್…

ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

14/03/2026 2:35 PM

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

14/03/2026 1:50 PM

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.