ಬೆಂಗಳೂರು : ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧವಾಗಿದ್ದು, ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗಪತ್ತೆ ನಿಷೇಧ ಕಾಯ್ದೆ 1994 ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.
ಭ್ರೂಣ ಲಿಂಗ ಪತ್ತೆ, ಭ್ರೂಣ ಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುವಂತಿಲ್ಲ. ಉಲ್ಲಂಘಿಸಿದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ಜೊತೆಗೆ ರೂ 10,000/- ವರೆಗೆ ದಂಡ ವಿಧಿಸಲಾಗುವುದು.
ಗರ್ಭಿಣಿಯ ಪತಿ, ಅವರ ಸಂಬಂಧಿಕರು ಹಾಗೂ ಯಾವುದೇ ವ್ಯಕ್ತಿಯು ಭ್ರೂಣಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಅಂತಹವರೂ ಕೂಡಾ ಈ ಕಾಯ್ದೆಯ ಕಾನೂನಿನಡಿಯಲ್ಲಿ ಶಿಕ್ಷಾರ್ಹರು.
ಸಂಬಂಧಿಕರು/ದಲ್ಲಾಳಿಗಳು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದಲ್ಲಿ ಮೊದಲ ಅಪರಾಧಕ್ಕೆ 3 ವರ್ಷಗಳ ವರೆಗೆ ಜೈಲು ಶಿಕ್ಷೆ ಜೊತೆಗೆ ರೂ.50,000/- ಗಳ ವರೆಗೆ ದಂಡ ವಿಧಿಸಲಾಗುವುದು. ನಂತರದ ಅಪರಾಧಕ್ಕೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಜೊತೆಗೆ ರೂ.1.00,000/- ಗಳ ವರೆಗೆ ದಂಡ ವಿಧಿಸಲಾಗುವುದು.