ಬೆಂಗಳೂರು : ಮನದ ಕಡಲು ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ್ದು, ಸಿನಿಮಾದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್ ಗೋಡೌನ್ನಲ್ಲಿ ಈ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಶಿವರಾಜ್(30) ಮೃತಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ನಿರ್ಲಕ್ಷ್ಯದ ವಹಿಸಿದ ಹಿನ್ನೆಲೆಯಲ್ಲಿ ಮನದ ಕಡಲು ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ವಿರುದ್ಧ ದೂರು ದಾಖಲಾಗಿದೆ.
ಮಂಗಳವಾರ ಸಂಜೆ 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದಾಗ ಆಯಾತಪ್ಪಿ ಲೈಟ್ ಮ್ಯಾನ್ ಮೋಹನ್ ಕುಮಾರ್ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.