Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂಸ್ಟೇ ನಿರ್ಮಿಸಿದ್ರೆ `FIR’ ಫಿಕ್ಸ್ !
KARNATAKA

BIG NEWS : ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂಸ್ಟೇ ನಿರ್ಮಿಸಿದ್ರೆ `FIR’ ಫಿಕ್ಸ್ !

By kannadanewsnow57

ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ಗಳ ವಿರುದ್ಧ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಎಫ್ಐಆರ್ ಆದ ರೆಸಾರ್ಟ್ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸಿ ಇತರೆ ಕ್ರಮಗಳನ್ನು ಜರುಗಿಸಬೇಕು. ಪ್ರತಿಯೊಂದಕ್ಕೂ ನಾನೇ ಕರೆದು ತಮಗೆ ಹೇಳಬೇಕಾ, ಹಾಗಾದರೆ ತಮ್ಮ ಜವಾಬ್ದಾರಿ ಏನು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಮ್ಮ ಇಲಾಖೆಗಳಿಗೆ ಸಂಬAಧಿಸಿದ ಕೆಲಸವನ್ನು ಜವಾಬ್ದಾರಿಯಿಂದ ತಾವು ನಿರ್ವಹಿಸಬೇಕು. ಸರ್ಕಾರದ ನಿಯಮಗಳನ್ವಯ ಅಗತ್ಯ ದಾಖಲೆಗಳನ್ನು ಪರಿಶೀಲಿಸದೆ ಹೋಂಸ್ಟೇ ಮತ್ತು ರೆಸಾರ್ಟ್ಗಳಿಗೆ ಕಟ್ಟಡ ಪರವಾನಗಿ ನೀಡಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.

ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ರೆಸಾರ್ಟ್ ಹಾಗೂ ಹೋಂಸ್ಟೇಗಳು ಇರುವ ಹಾಗಿಲ್ಲ. ಈ ಕುರಿತು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸರ್ವೆ ಕಾರ್ಯ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ತಕ್ಷಣ ಅವುಗಳಿಗೆ ಸಂಬಂಧಿಸಿದ ಇಲಾಖೆಯವರು ಕಡಿವಾಣ ಹಾಕಬೇಕು. ಹವಾಮಾ ವ್ಯಾಪ್ತಿಯಲ್ಲಿ ಯಾವುದೇ ರೆಸಾರ್ಟ್ಗಳಿಗೆ ಅನುಮತಿ ನೀಡಲು ಬರುವುದಿಲ್ಲ. ಈ ಕುರಿತು ಅಧಿಕಾರಿಗಳು ಗಮನಹರಿಸಬೇಕು. ಹಂಪಿ ಕೆಫೆ, ರಾಖಿ ಮಿಡೋಸ್ ರೆಸಾರ್ಟ್ ಸೇರಿದಂತೆ ಇತರೆ ನಿಯಮ ಉಲ್ಲಂಘನೆ ಮಾಡಿದ ರೆಸಾರ್ಟ್ಗಳ ಟ್ರೇಡ್ ಲೈಸೆನ್ಸ್ ಕ್ಯಾನ್ಸಲ್ ಆಗಿರುವ ಕುರಿತು ಮಾಹಿತಿ ನೀಡಿ ಎಂದರು. ಉಪಲೋಕಾಯುಕ್ತರು ದಾಖಲಿಸಿದ ಸೊಮೊಟೊ ಪ್ರಕರಣಗಳ ರಿಪೋರ್ಟ್ಗಳನ್ನು ಕೊಡಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಕೆಲಸ ಕೇವಲ ಪೇಪರ್ನಲ್ಲಿ ಆಗಬಾರದು. ಗ್ರೌಂಡ್ ಲೇವಲ್ನಲ್ಲಿ ಕೆಲಸ ಆಗಬೇಕು. ಟ್ರೇಡ್ ಲೈಸೆನ್ಸ್ ರದ್ದಾದ ಮೇಲೆ ಅವುಗಳನ್ನು ಮುಚ್ಚುವ ಕೆಲಸ ಆಗಬೇಕು. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಿಡಿಓಗಳು ಏನು ಮಾಡುತ್ತಿದ್ದೀರಾ, ಈ ಕುರಿತು ಗಮನ ಹರಿಸುತ್ತಿರಬೇಕು. ಸಭೆಗೆ ಬಂದಾಗ ಮಾತ್ರವೇ ಕೆಲಸ ಮಾಡಿದಹಾಗೆ ಹೇಳಬಾರದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಅಧಿಕಾರಿಗಳು ಯಾವುದೇ ಅನುಮತಿ ನೀಡುವ ಮುಂಚೆ ಎಲ್ಲವನ್ನೂ ಪರಿಶೀಲನೆ ಮಾಡಿ ಕೊಡಬೇಕು. ಇಲ್ಲವಾದರೆ ಕಾನೂನು ಸಮಸ್ಯೆ ಆಗುತ್ತವೆ. ನಮ್ಮ ಪೊಲೀಸರು ಕೇಳಿದಾಗ ಅವರು ಆ ಅನುಮತಿ ಪಡೆದಿದ್ದೇವೆ, ಇದು ಪಡೆದಿದ್ದೇವೆ ಎಂದು ರೆಸಾರ್ಟ್ನವರು ನಮ್ಮ ಪೊಲೀಸರಿಗೆ ಹೇಳುತ್ತಾರೆ. ಮೊನ್ನೆ ಮುನಿರಾಬಾದನಲ್ಲಿ ಘಟನೆಯಾದ ನಂತರ ಗಂಗಾವತಿ ಮತ್ತು ಸಾಣಾಪುರದಲ್ಲಿ ನಮ್ಮ ಪೊಲೀಸರನ್ನು ಗಸ್ತಿಗೆ ನಿಯೋಜಿಸಲಾಗಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಸಹಾಯಕ ಆಯುಕ್ತರಾದ ಕ್ಯಾ. ಮಹೇಶ ಮಾಲಗಿತ್ತಿ. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಓ ಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

BIG NEWS: `FIR’ fixed if illegal resort homestay built within eco-sensitive zone!
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.