ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಪಟಾಕಿ ಸಿಡಿತದಿಂದ ಗಾಯಗೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇದೀಗ 150ಕ್ಕೆ ಪಟಾಕಿ ಸಿಡಿತದಿಂದ ಗಾಯಗೊಂಡಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೂ ಎಂಟು ಜನರು ಶಾಶ್ವತವಾಗಿ ತಮ್ಮ ಕಣ್ಣು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಪಟಾಕಿ ಸಿಡಿತ ಪ್ರಕರಣ ಮತ್ತೆ ಏರಿಕೆಯಾಗಿದ್ದು ಪಟಾಕಿ ಹಿಡಿದು 150ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಶಾಶ್ವತವಾಗಿ 8 ಜನರು ತಮ್ಮ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ ಜನ ನಿಂತು ನೋಡುವಾಗ ಪಟಾಕಿ ಸಿಡಿದು ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಶೇಕಡ 60 ರಷ್ಟು ಜನರಿಗೆ ಪಟಾಕಿ ಸಿಡಿದು ಕಣ್ಣಿಗೆ ಹಾನಿಯಾಗಿದೆ. ನಾರಾಯಣ ನೇತ್ರಾಲಯಕ್ಕೆ 75 ಜನರನ್ನು ದಾಖಲು ಮಾಡಲಾಗಿದೆ. ಇನ್ನು ಮಿಂಟೋ ಆಸ್ಪತ್ರೆಯಲ್ಲಿ 25ಕ್ಕೂ ಹೆಚ್ಚು ಜನರು ದಾಖಲಾಗಿದ್ದಾರೆ.