ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಕಾಂಗ್ರೆಸ್ ಪ್ರಕಟಣೆ ಹೊರಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ತಿಳಿಸಿದೆ.
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ.
ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು… pic.twitter.com/7J4j0e3aE2
— Karnataka Congress (@INCKarnataka) August 15, 2024