ಬೆಂಗಳೂರು : ಜಾತಿ ಸಮೀಕ್ಷೆ ಮಾಡದ ಪಾಲಿಕೆ ಅಧಿಕಾರಿಗಳಿಗೆ ಇದೀಗ ಚಾಟಿ ಬೀಸಲಾಗಿದ್ದು, ನಿಗದಿತ ಸಮಯದಲ್ಲಿ ಮಾಹಿತಿ ಸಂಗ್ರಹಿಸದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಅಡಿಯಲ್ಲಿ ಐವರು ಅಧಿಕಾರಿಗಳು ಅಮಾನತು ಮಾಡಲಾಗಿದೆ.
ಐವರನ್ನು ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಇದೀಗ ಆದೇಶ ಹೊರಡಿಸಿದ್ದಾರೆ. ಶ್ರೀಜೇಶ್, ವಿಜಯಕುಮಾರ್ ಶಿವರಾಜ್ ಹೆಚ್‍ಸಿ, ಮಹದೇವ್ ಹಾಗು ಶ್ರೀ ಶಂಕರ್ ಅಮಾನತುಗೊಂಡ ಅಧಿಕಾರಿಗಳು ಎಂದು ತಿಳಿದುಬಂದಿದೆ.
ನಿತ್ಯ ಮನೆಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಮೊಬೈಲ್ ಲಾಗಿನ್ ಮಾಡದೆ ಸಿಬ್ಬಂದಿಗಳು ಕಳ್ಳಾಟ ನಡೆಸಿದ್ದಾರೆ. ಹಾಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರು ಇದೀಗ ಇವರನ್ನು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.