ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದೇಶದಲ್ಲಿ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕೆ ಯೋಜನೆಯನ್ನು ಪ್ರಾರಂಭಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ
ದೇಶದಲ್ಲಿಯೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ₹4.98 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್ ಗಾಗಿ 4.98 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು. ಪಶುಪಾಲನಾ ವಿಭಾಗ ಬಿಬಿಎಂಪಿ ವತಿಯಿಂದ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕೆಯನ್ನು ಯಶಸ್ವಿಯಾಗಿ ನಿಯಮಾನುಸಾರ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ *"ಸಂಯುಕ್ತ ಲಸಿಕೆ"(Combined Vaccine)* ಹಾಕುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ನೀಡಿದರು. ಈ ಬಳಿಕ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಮೊದಲಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ ಎಂದು… pic.twitter.com/Ht4aYRKQ2D
— Bruhat Bengaluru Mahanagara Palike (@BBMPofficial) February 14, 2025