ಚಾಮರಾಜನಗರ : ಬಾಳೆ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಹುಲಿಯನ್ನು ಇದೀಗ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಮಕ್ತಿ ಕಾಲೋನಿ ಬಳಿ ಸೆರೆ ಹಿಡಿಯಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನ ಅರವಳಿಕೆ ಮದ್ದು ನೀಡಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಹುಲಿಯನ್ನು ಸೆರೆ ಹಿಡಿದಿದ್ದಕ್ಕೆ ಬರಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.








