ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ಪಕ್ಷ ಹೇಳಿದ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಹೇಳಿದ್ರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲಿದಿದ್ದರೆ ಇಲ್ಲ. ಹಾವೇರಿ, ಬೆಳಗಾವಿಯಿಂದ ನನ್ನನ್ನು ಕರೆಯುತ್ತಿದ್ದಾರೆ. ಆದರೆ ಹುಬ್ಬಳ್ಳಿ-ಧಾರವಾಡಕ್ಕೆ ಬಹಳ ಜನ ಬೆಂಬಲ ತೋರಿಸುತ್ತಿದ್ದಾರೆ ಎಂದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಜನರ ಒತ್ತಡ ಬಹಳಷ್ಟಿದ್ದು, ಪಕ್ಷದ ನಾಯಕರು ಹೇಳಿದ್ರೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.