ವಿಜಯಪುರ : ಮುಂದಿನ ತಿಂಗಳು ಫೆಬ್ರವರಿ 4ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ 1008 ಸಾಧು-ಸಂತರ ಪಾದ ಪೂಜೆ ಮಾಡುವ ಮೂಲಕ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮಾಡಲಾಗುತ್ತದೆ ಎಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟಿಸುವುದಾಗಿ ಘೋಷಿಸಿದ್ದಾರೆ. ಒಂದು ಲಕ್ಷ ಜನರ ಭಾಗವಹಿಸುವಿಕೆಯೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಸ್ವಾಮೀಜಿಗಳ ಅಭಿವೃದ್ಧಿ ಮತ್ತು ಹಿಂದೂ ಸಮಾಜದ ಹಿತಾಸಕ್ತಿಗಳ ರಕ್ಷಣೆಗೆ ಬ್ರಿಗೇಡ್ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಉದ್ಘಾಟನೆ ಮಾಡುತ್ತಾರೆ. ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ.ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ.
ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ವಿಚಾರವಾಗಿ ಮಾತನಾಡಿದ ಅವರು, ನನ್ನ ವಿರುದ್ಧ ಆರೋಪ ಬಂದಾಗ ನಾನು ತಕ್ಷಣ ರಾಜೀನಾಮೆ ನೀಡಿದ್ದೆ ನಾನು ಆರ್ ಎಸ್ ಎಸ್ ನಿಂದ ಬೆಳೆದು ಬಂದವನು ನನ್ನ ವಿರುದ್ಧ ಆರೋಪ ಬಂದ ತಕ್ಷಣ ನಾವೇ ನಾನು ರಾಜೀನಾಮೆ ನೀಡಿದ್ದೇನೆ ಕೆಲವರು ನನ್ನ ವಿರುದ್ಧ ರಾಜಕೀಯ ಮಾಡಿದರು ಅವರು ಈಗ ಅನುಭವಿಸುತ್ತಿದ್ದಾರೆ. ನನ್ನ ವಿರುದ್ಧ ಕೆಲವರು ತೆರೆ ಮನೆಯಲ್ಲಿ ಕೆಲಸ ಮಾಡಿದರು ಇದೀಗ ನನ್ನ ಹಿಂದೆ ಕೆಲಸ ಮಾಡಿದವರಿಗೆ ದೇವರೇ ಉತ್ತರ ನೀಡುತ್ತಿದ್ದಾನೆ ಮುಂದನ ದಿನಗಳಲ್ಲಿ ಅವರಿಗೆ ದೇವರು ಒಳ್ಳೆಯದು ಮಾಡುತ್ತಾನೆ ನನ್ನ ವಿರುದ್ಧ ಕೆಲಸ ಮಾಡಿದವರು ಯಾರು ಯಾವ ಪಕ್ಷದವರು ಅನ್ನೋದು ಸಮಯ ಬಂದಾಗ ಎಲ್ಲವೂ ಗೊತ್ತಾಗುತ್ತದೆ ಎಂದರು.