ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆದ್ದರಿಂದ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದೇವೇಗೌಡರು, ಶುಕ್ರವಾರ ಬೆಳಗ್ಗೆ ತಮ್ಮ ವಾರ್ಡ್‌ನಲ್ಲಿ ಎಂದಿನಂತೆ ದಿನಪತ್ರಿಕೆಗಳತ್ತ ಕಣ್ಣು ಹಾಯಿಸಿದರು. ಬಳಿಕ ಬಳಿಕ ಕೆಲಹೊತ್ತು ಟಿವಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯನ್ನ ವೀಕ್ಷಿಸಿದರು ಎಂದು ಮೂಲಗಳು ತಿಳಿಸಿವೆ . ಗುರುವಾರ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಆಸ್ಪತ್ರೆಯ ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ.
ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆರೋಗ್ಯ ಸ್ಥಿತಿಯ ಬಗ್ಗೆ ನಿಗಾವಹಿಸಲು ಆಸ್ಪತ್ರೆಯಲ್ಲಿಯೇ ಇರಿಸಿ ಕೊಳ್ಳ ಲಾಗಿದೆ. ಶನಿವಾರ ಅಥವಾ ಭಾನುವಾರ ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡುವ ಸಾಧ್ಯತೆಯಿದೆ. ಅವರು ತೀವ್ರ ಓಡಾಟದಿಂದ ದೈಹಿಕವಾಗಿ ಆಯಾಸಗೊಂಡಿದ್ದರು.