ಉಡುಪಿ : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಮಹಿಳೆ ಒಬ್ಬಳು ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಸ್ಥಳೀಯ ನಿವಾಸಿಗಳಾದ ಲಕ್ಷ್ಮಿಬಾಯಿ, ಸುಂದರ್, ಶಿಲ್ಪ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ವೈರಲ್ ಆಗಿತ್ತು.