BIG NEWS: ಮತದಾರರ ಪಟ್ಟಿ ಹಗರಣ ಪ್ರಕರಣ: ನಾಲ್ವರು ಆರ್ಓಗಳ ಬಂಧನ
ಬೆಂಗಳೂರು: ಮತದಾರರ ಪಟ್ಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರ್ಓಗಳ ಬಂಧನವಾಗಿದೆ. ಸದ್ಯ ಪ್ರಕರವನ್ನು ಹಲಸೂರು ಗೇಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿ.ಬಿ.ಭೀಮಾಶಂಕರ್ (ಚಿಕ್ಕಪೇಟೆ ವಿಭಾಗ), ಸೊಹೆಲ್ ಅಹಮದ್ (ಶಿವಾಜಿನಗರ), ಚಂದ್ರಶೇಖರ್ (ಮಹಾದೇವಪುರ) ಹಾಗೂ ಆರ್ಆರ್ ನಗರದ ಎಆರ್ಓ ಮಹೇಶ್ ಬಂಧಿತ ಅಧಿಕಾರಿಗಳಾಗಿದ್ದಾರೆ. ಇದಲ್ಲದೇ ಬಿಬಿಎಂಪಿ (BBMP) ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಡಿಸಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ.
Copy and paste this URL into your WordPress site to embed
Copy and paste this code into your site to embed