Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!
KARNATAKA

BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!

By kannadanewsnow57

ಬೆಂಗಳೂರು: ರಾಜ್ಯದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿರುವ ಗೃಹರಕ್ಷಕ ದಳ (Home Guards) ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಡಿಜಿ ಮತ್ತು ಐಜಿಪಿ ಕಚೇರಿ ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ದೂರಿನನ್ವಯ ಈ ಆದೇಶ ಹೊರಡಿಸಲಾಗಿದೆ. ಅಧಿಕಾರವಿಲ್ಲದಿದ್ದರೂ ಹಲವು ಕಡೆ ಗೃಹರಕ್ಷಕ ದಳದ ಸಿಬ್ಬಂದಿ ಮತ್ತು ಸಶಸ್ತ್ರ ಪಡೆ ಸಿಬ್ಬಂದಿಗಳು ವಾಹನಗಳನ್ನು ನಿಲ್ಲಿಸಿ ಸವಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಆದೇಶದಲ್ಲಿ ಏನಿದೆ?

ಮೋಟಾರು ವಾಹನ ಕಾಯ್ದೆ 1988ರ ಅನ್ವಯ, ಕೇವಲ ಸಹಾಯಕ ಪೊಲೀಸ್ ಉಪ ನಿರೀಕ್ಷಕ (ASI) ಮತ್ತು ಅದಕ್ಕಿಂತ ಮೇಲ್ಪಟ್ಟ ದರ್ಜೆಯ ಅಧಿಕಾರಿಗಳಿಗೆ ಮಾತ್ರ ವಾಹನ ತಪಾಸಣೆ ನಡೆಸಲು ಮತ್ತು ದಂಡ ವಿಧಿಸಲು ಅಧಿಕಾರವಿರುತ್ತದೆ.ಪೊಲೀಸ್ ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು ಕೇವಲ ಸಂಚಾರ ನಿಯಮ ಉಲ್ಲಂಘನೆಗಳ ಬಗ್ಗೆ ಎಫ್‌ಟಿವಿಆರ್ (FTVR) ವರದಿಯ ಮೂಲಕ ನೋಟಿಸ್ ನೀಡಲು ಮಾತ್ರ ಅವಕಾಶವಿದೆ.

ಯಾವುದೇ ಅಧಿಕಾರವಿಲ್ಲದ ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸಶಸ್ತ್ರ ಪಡೆಯ ಸಿಬ್ಬಂದಿಗಳು ಸರ್ಕಾರಿ ವಾಹನ ಬಳಸಿ ಸಾರ್ವಜನಿಕರ ವಾಹನ ತಡೆಯುವಂತಿಲ್ಲ.

ದೌರ್ಜನ್ಯಕ್ಕೆ ಬ್ರೇಕ್:

ವಾಹನ ಸವಾರರ ಮೇಲೆ ದೌರ್ಜನ್ಯ ಎಸಗುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ವಾಹನದ ಕೀ ಕಿತ್ತುಕೊಳ್ಳುವುದು ಅಥವಾ ಕೇಸ್ ದಾಖಲಿಸುವ ಬೆದರಿಕೆ ಹಾಕುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂತಹ ನಿಯಮಬಾಹಿರ ಚಟುವಟಿಕೆಗಳನ್ನು ತಡೆಯಲು ನಿರಂತರ ಕಾರ್ಯಾಚರಣೆ ನಡೆಸುವಂತೆ ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಕೆ. ಪರಶುರಾಮ್ ಅವರು ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು ಹಾಗೂ ಅಧೀಕ್ಷಕರಿಗೆ ಸೂಚಿಸಿದ್ದಾರೆ.

From now on the Home Guard and Armed Police personnel will not be able to check vehicles in the state.!
Share. Facebook Twitter LinkedIn WhatsApp Email

Related Posts

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

2 Mins Read

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.