ಬೆಂಗಳೂರು : ದೇಗುಲದ ವಾತಾವರಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕದ ಎಲ್ಲಾ ದೇವಸ್ಥಾನಗಳ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್ ಮಾಡಲಾಗಿದೆ ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ರಾಮನಗರದಲ್ಲಿ ಹೇಳಿದ್ದಾರೆ.
ದೇವಸ್ಥಾನದ ಒಳಗೆ ಪ್ಲಾಸ್ಟಿಕ್ ನಿಷೇಧವಿದ್ದು, ಹೊರಭಾಗದಲ್ಲಿ ನಿಷೇಧ ಹೇರುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸಲಿವೆ. ಇದರ ಜೊತೆಗೆ, ದೇವಸ್ಥಾನಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಸರ್ಕಾರವು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.
ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಮನಗರದಲ್ಲಿ ಈ ವಿಷಯ ತಿಳಿಸಿದರು. ದೇವಸ್ಥಾನದ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧಾರ ಮಾಡುತ್ತವೆ. ಈ ನಿರ್ಧಾರವನ್ನು ಪರಿಸರದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿವರಿಸಿದರು.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ಉಲ್ಲಂಘಿಸಿದರೆ ದಂಡ ವಿಧಿಸುವಂತೆ ದೇವಸ್ಥಾನದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇಗುಲಕ್ಕೆ ಬರುವ ಭಕ್ತಾಧಿಗಳು ವಿಶೇಷದಿನದಂದು ಬಂದು ಪೂಜೆಗಳನ್ನು ಮಾಡಿಸುತ್ತಾರೆ. ಆಗ ಹೂ ಹಣ್ಣು ಕಾಯಿಗಳನ್ನು ಪ್ಲಾಸ್ಟಿಕ್‌ನಲ್ಲಿ ತಂದಿರುತ್ತಾರೆ. ಹಾಗೆಯೇ ನೂರಾರು ಜನರು ತರುವ ಹಿನ್ನೆಲೆ, ಪ್ಲಾಸ್ಟಿಕ್ ನಿಷೇಧಿಸಲಾಗಿದೆ