ಬೆಂಗಳೂರು : ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಈ ಹಿಂದೆ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಕನಿಷ್ಠ 30 ದಿನ ಆಗುತ್ತಿತ್ತು. ಈಗ ಆ ವ್ಯವಸ್ಥೆ ಬದಲಾಗಿದೆ ಎಂದು ಅವರು ಹೇಳಿದ್ದಾರೆ.