ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗೋವಾದಲ್ಲಿ ಪಬ್ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 25 ಜನರು ದುರ್ಮರಣ ಹೊಂದಿದ್ದರು. ಇದರ ಬೆನ್ನಲ್ಲೇ ಹೊಸ ವರ್ಷ ಆಚರಣೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ ಹೊಸ ವರ್ಷದ ಮುನ್ನ ಪೊಲೀಸರು ಬೆಂಗಳೂರಿನ ಎಲ್ಲಾ ಪಬ್ ಕ್ಲಬ್ಗಳ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ.
ಹೌದು ಹೊಸ ವರ್ಷಾಚರಣೆಗೊ ಮುನ್ನ ಪೊಲೀಸರು ಇದೀಗ ಬೆಂಗಳೂರಿನಲ್ಲಿ ಹದ್ದಿನ ಕಣ್ಣು ಇಟ್ಟಿದ್ದಾರೆ. ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಬೆಂಗಳೂರಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಬೆಂಗಳೂರು ಪೊಲೀಸರಿಂದ ಇದೀಗ ಆಪರೇಷನ್ ಪಬ್ ಶುರು ಆಗಿದೆ ವಾಹನಗಳು, ಪಬ್ ರೆಸ್ಟೋರೆಂಟ್ ಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಹೊಸ ವರ್ಷ ಆಚರಣಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ. ಏಕೆಂದರೆ ಗೋವಾದಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಪೊಲೀಸರು ಇದೀಗ ಬೆಂಗಳೂರಿನಲ್ಲಿ ಮುಂಜಾಗ್ರತೆ ವಹಿಸಿದ್ದಾರೆ.








