ಬೆಂಗಳೂರು : ಲೋಕಾಯುಕ್ತ ಹಾಗೂ ಎಸ್‌ಐಟಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್‌ನವರು ತೆಗೆದುಕೊಳುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಡಿಜಿಪಿ ಚಂದ್ರಶೇಖರ್ ಗಾದೆಯ ಅರ್ಥದಲ್ಲಿ ಹೇಳಿದ್ದಾರೆ ಆದರೆ ಕುಮಾರಸ್ವಾಮಿ ಅವರು ನನಗೆ ಅಂದಿದ್ದಾರೆ ಅಂತ ಯಾಕೆ ಅನ್ಕೋ ಬೇಕು? ಅವರು ಹೇಳಿದ್ದು ಬರ್ನಾಡ್ ಷಾ ಬಗ್ಗೆ ಆದರೆ ಕುಮಾರಸ್ವಾಮಿ ನನಗೆ ಹೇಳಿದ್ದಾರೆ ಅಂತ ತಿಳಿದುಕೊಳ್ಳುವುದು ತಪ್ಪು ಎಂದು ತಿಳಿಸಿದರು.
ಚಂದ್ರಶೇಖರ್ ನೇತೃತ್ವದ ಎಸ್‌ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ.ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು. ಎಡಿಜಿಪಿ ಚಂದ್ರಶೇಖರ ಅವರ ಮೇಲೆ ಎಚ್‍ಡಿ ಕುಮಾರಸ್ವಾಮಿ ಗಂಭೀರವಾದ ಆರೋಪ ಮಾಡಿದ್ದರು. ಇದಕ್ಕೆ ಚಂದ್ರಶೇಖರ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆಯುವ ಮೂಲಕ ಹೆಚ್‍ಡಿ ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದ್ದರು.