ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳದ ಮೂಲದ ಮಹಿಳೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಪೊಲೀಸ್ ಸರು ಪ್ರಕರಣದ A1 ಆರೋಪಿಯಾಗಿದ್ದ ಮಿಥುನ್ ನನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಆಗಿರುವಂತಹ A1 ಆರೋಪಿ ಮಿಥುನ್ ನನ್ನ ಮಾದನಾಯಕನಹಳ್ಳಿ ಪೋಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಮಿಥುನ್ ಪರಾರಿಆಗಿದ್ದ ಶಿವಗಂಗೆಯ ಬಳಿ ತಲೆಮರಿಸಿಕೊಂಡಿದ್ದ ಮಿಥುನನ್ನು ಅರೆಸ್ಟ್ ಮಾಡಿದ್ದು ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಟೆಕ್ನಿಕಲ್ ಎವಿಡೆನ್ಸ್ ಸಂಗ್ರಹಿಸಲು ಮುಂದಾಗಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವರದಿಯನ್ನು ಸಿದ್ಧಪಡಿಸಲಿದ್ದಾರೆ.








