ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ವಿಚಾರವಾಗಿ ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಸಂಪುಟದಲ್ಲಿ ತೀರ್ಮಾನ ಆಗಿದೆ. ಬಹುಷಃ GBA ಚುನಾವಣೆಯಲ್ಲಿ ಕೂಡ ಬ್ಯಾಲೆಟ್ ಪೇಪರ್ ಬಳಕೆ ಅಪ್ಲೈ ಮಾಡಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಈಗಾಗಲೇ ಸಂಪುಟದಲ್ಲಿ ತೀರ್ಮಾನ ಆಗಿದ್ದು, ತಾಲೂಕ ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತೆ. ಬಹುಶಃ GBA ಚುನಾವಣೆಗು ಕೂಡ ಅದನ್ನೇ ಅಪ್ಲೈ ಮಾಡುತ್ತಾರೆ ಎಂದರು.








