ಮೈಸೂರು : ವೈದ್ಯರ ನಿರ್ಲಕ್ಷಕ್ಕೆ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಇದೀಗ ಮೃತ ಬಾಲಕಿಯ ಖಾಸಗಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆಯ ಜನತಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಹೌದು ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದು, ಮೃತ ಬಾಲಕಿ ಲಕ್ಷ್ಮಿ ಎಂದು ತಿಳಿದುಬಂದಿದ್ದು, ಜನತಾ ನಗರದ ನಿವಾಸಿಯಾಗಿದ್ದಳು. ಹೊಟ್ಟೆನೋವಿನ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಇದೀಗ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಸಂಬಂಧಿಕರು ಆರೋಪ ಮಾಡುತ್ತಿದ್ದು, ಖಾಸಗಿ ಆಸ್ಪತ್ರೆಯ ಮುಂದೆ ಸಂಬಂಧಿಕರು ಪ್ರತಿಭಟನೆ ಮಾಡುತ್ತಿದ್ದಾರೆ.
ಡಿಸೆಂಬರ್ 19 ರಂದು ಈ ಒಂದು ಘಟನೆ ನಡೆದಿದ್ದು, ಡಿಸೇಂಬರ್ 2ರಂದು ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ. ಅದಾದ ನಂತರ ಡಿಸೆಂಬರ್ 21ರಂದು ಮತ್ತೊಂದು ಆಸ್ಪತ್ರೆಗೆ ಬಾಲಕಿಯನ್ನು ಶಿಫ್ಟ್ ಮಾಡಲಾಗಿತ್ತು. ಆದರೆ ಇಂದು ಬೆಳಗಿನ ಜಾವ ಬಾಲಕಿ ಲಕ್ಷ್ಮಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಹಾಗಾಗಿ ಇದೀಗ ಮೃತ ಬಾಲಕಿ ಲಕ್ಷ್ಮಿ ಸಂಬಂಧಿಕರು ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.