ಬೆಂಗಳೂರು : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ. ನಿರ್ದಿಷ್ಟವಾಗಿ ಇಂತಹದ್ದೇ ಖಾತೆ ನೀಡಿ ಎಂದು ಹೇಳುವುದಿಲ್ಲ. ಹಿರಿತನದ ಮೇಲೆ ಖಾತೆ ನೀಡಲಿ ಎಂದು ವಿಧಾನಸೌಧದಲ್ಲಿ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ, ನಾನು ಎಂಟು ಬಾರಿ ಸಚಿವನಾಗಿದ್ದೇನೆ. ಐದು ಬಾರಿ ಶಾಸಕನಾಗಿದ್ದೇನೆ. ಸಾರಿಗೆ, ಗೃಹ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ.. ಇದೀಗ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿತನ ಆಧಾರದ ಮೇಲೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇನೆ. ನಿರ್ದಿಷ್ಟವಾಗಿ ಇಂತಹದ್ದೇ ಖಾತೆ ನೀಡಿ ಎಂದು ಕೇಳಿಲ್ಲ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುವೆ ಎಂದರು.
ಇಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬುದರ ಬಗ್ಗೆ ಇಂದು ಚರ್ಚೆಯಾಗಲಿದೆ ಎಂದ ಅವರು, ಕುರ್ಚಿ ಕಾಳಗ ಸಂಬಂಧ ಸುಗಮವಾಗಿ ಅಧಿಕಾರ ಹಂಚಿಕೆಯಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಒಪ್ಪಂದದಂತೆ ಅಧಿಕಾರ ಹಂಚಿಕೆಯಾಗಿದೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಡೆದ ಮಾತುಕತೆಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಾತುಕತೆ ನಡೆಸಿತ್ತು ಎಂದು ತಿಳಿಸಿದರು.








