Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ನಾಲ್ಕು ಮನೆಗಳಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆ ಈಗ ಪಶ್ಚಿಮ ಬಂಗಾಳದ ಸಚಿವೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ಜೂನ್ 6ಕ್ಕೆ ಭಾರತಕ್ಕೆ ಮರಳಲಿದ್ದಾರೆ ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ದಿಪ್ಕೆ

ಗೃಹಲಕ್ಷ್ಮಿ ಹಣದಿಂದ 40 ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಕೊಡಿಸಿದ `SDMC’ ಸದಸ್ಯೆಯರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜಾಗತಿಕ ಹೂಡಿಕೆದಾರರ ಸಮಾವೇಶ : ರಾಜ್ಯದಲ್ಲಿ 12 ವಿಶೇಷ ಹೂಡಿಕೆ ವಲಯ ಸ್ಥಾಪನೆ | Invest Karnataka 2025
KARNATAKA

BIG NEWS : ಜಾಗತಿಕ ಹೂಡಿಕೆದಾರರ ಸಮಾವೇಶ : ರಾಜ್ಯದಲ್ಲಿ 12 ವಿಶೇಷ ಹೂಡಿಕೆ ವಲಯ ಸ್ಥಾಪನೆ | Invest Karnataka 2025

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು.

ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಅವರು ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ. ಸರಕಾರವು ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ ಎಂದರು.

ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಸ್ಪರ್ಧಾತ್ಮಕ ಉದ್ಯಮಗಳ ಸ್ಥಾಪನೆಯೇ ಭವಿಷ್ಯದ ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳಾಗಿವೆ. ಇದಕ್ಕಾಗಿ ಕೈಗಾರಿಕಾ ರಂಗದಲ್ಲಿ ಡಿಜಿಟಲ್ ಪರಿವರ್ತನೆಯನ್ನು ಅಳವಡಿಸಿ ಕೊಳ್ಳಲಾಗುತ್ತಿದೆ. ಜತೆಗೆ ಇಂಗಾಲವನ್ನು ಕಡಿಮೆ ಹೊರಸೂಸುವ ಹಾಗೂ ಪರಿಸರಸ್ನೇಹಿ ಉಪಕ್ರಮಗಳಿಗೂ ಗಮನ ಹರಿಸಲಾಗಿದೆ. 55 ಲಕ್ಷ ಜನರಿಗೆ ಉದ್ಯೋಗ ನೀಡಿರುವ 8 ಲಕ್ಷ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

BIG NEWS: Global Investors Meet: 12 Special Investment Zones to be set up in the state | Invest Karnataka 2025
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಹಣದಿಂದ 40 ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಕೊಡಿಸಿದ `SDMC’ ಸದಸ್ಯೆಯರು!

1 Min Read

ಬಿಯರ್ ಪ್ರಿಯರೇ ಬಿಗ್ ಶಾಕ್ : ಬೆಲೆ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!

2 Mins Read

ಇಂದು ರಾಜ್ಯ ಸಚಿವ ಸಂಪುಟ ಸರ್ಕಸ್ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ.!

1 Min Read
Recent News

ಪ್ರತಿದಿನ ನಾಲ್ಕು ಮನೆಗಳಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆ ಈಗ ಪಶ್ಚಿಮ ಬಂಗಾಳದ ಸಚಿವೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ಜೂನ್ 6ಕ್ಕೆ ಭಾರತಕ್ಕೆ ಮರಳಲಿದ್ದಾರೆ ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ದಿಪ್ಕೆ

ಗೃಹಲಕ್ಷ್ಮಿ ಹಣದಿಂದ 40 ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಕೊಡಿಸಿದ `SDMC’ ಸದಸ್ಯೆಯರು!

BIG NEWS: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!

State News
KARNATAKA

ಗೃಹಲಕ್ಷ್ಮಿ ಹಣದಿಂದ 40 ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಕೊಡಿಸಿದ `SDMC’ ಸದಸ್ಯೆಯರು!

By kannadanewsnow57 KARNATAKA 1 Min Read

ಗದಗ : ಸರ್ಕಾರ ನೀಡುವ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುವವರ ಮಧ್ಯೆ, ಇಲ್ಲೊಂದು ಮಹಿಳಾ ತಂಡ ವಿಭಿನ್ನವಾಗಿ ಯೋಚಿಸಿ ಎಲ್ಲರ ಮೆಚ್ಚುಗೆಗೆ…

ಬಿಯರ್ ಪ್ರಿಯರೇ ಬಿಗ್ ಶಾಕ್ : ಬೆಲೆ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!

ಇಂದು ರಾಜ್ಯ ಸಚಿವ ಸಂಪುಟ ಸರ್ಕಸ್ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ.!

ಇನ್ನು 2-3 ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಹೊಸ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.