ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಈಗಾಗಲೇ ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 06 ರವರೆಗೆ ವಿಸ್ತರಿಸಲಾಗಿದೆ ಎಂದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ 2024-25ನೇ ಸಾಲಿಗೆ ಬಿ.ಎಡ್ ಕೋರ್ಸ್ಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ಅಭ್ಯರ್ಥಿಗಳು ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಜಿಲ್ಲಾ ಮತ್ತು ತಾಲ್ಲೂಕುವಾರು ವಿವರ:
ಬಳ್ಳಾರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ ಭವನ, ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರ-ಮೊ.8310321101, ಸಂಡೂರು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಗೆ ಇಲಾಖೆೆ ಕಚೇರಿ ಆವರಣ ಸಂಡೂರು (ಮೊ.9036925966, 8660575061), ಸಿರುಗುಪ್ಪ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಕಚೇರಿ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ (ಮೊ.9148889975).
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ 8277799990 (24*7) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.