ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ ರೂ.153.53 ಲಕ್ಷಗಳ ಅನುದಾನ ಲಭ್ಯವಿದ್ದು, ಶೇ.90 ರಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ ಸಹಾಯಧನ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ
ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.
ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.
ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.
ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಸ್ವಂತ ಜಮೀನಿನ ಪಹಣಿ
ಅರ್ಜಿದಾರರ ಭಾವಚಿತ್ರ
ಬಿಪಿಎಲ್ ರೇಷನ್ ಕಾರ್ಡ್
ಮೊಬೈಲ್ ಸಂಖ್ಯೆ
ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸಬಹುದು.